ಬಾಲಿವುಡ್ ನಟ ಇರ್ಫಾನ್ ಖಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Update: 2020-04-28 21:22 IST
ಮುಂಬೈ, ಎ.28: ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಹಿಂದಿ ಚಿತ್ರನಟ ಇರ್ಫಾನ್ ಖಾನ್‌ರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.
ಹಠಾತ್ತಾಗಿ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಇರ್ಫಾನ್‌ರನ್ನು ಮುಂಬೈಯ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ . ಪತ್ನಿ ಸುತಾಪಾ ಸಿಕ್ದರ್ ಮತ್ತು ಇಬ್ಬರು ಪುತ್ರರು ಅವರೊಂದಿಗೆ ಇದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಇರ್ಫಾನ್ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇವರ ತಾಯಿ ಸಯೀದಾ ಬೇಗಂ ಕಳೆದ ಶನಿವಾರ ಜೈಪುರದಲ್ಲಿ ಕೊನೆಯುಸಿರೆಳೆದಿದ್ದಾರೆ.