ಬೆಳಗಾವಿ ಯೋಧನ ಬಂಧನ ಪ್ರಕರಣ: ಐಜಿಪಿ ನೇತೃತ್ವದ ತನಿಖೆಗೆ ಆದೇಶ
Update: 2020-04-28 23:32 IST
ಬೆಂಗಳೂರು, ಎ.28: ಬೆಳಗಾವಿಯ ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಬೆಳಗಾವಿ ವಲಯ ಐಜಿಪಿ ನೇತೃತ್ವದಲ್ಲಿ ನಡೆಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಪ್ರಕರಣದ ತನಿಖೆಯನ್ನು ಬೆಳಗಾವಿ ವಲಯ ಐಜಿಪಿ ನಡೆಸಬೇಕೆಂದು ಆದೇಶಿಸಿದ್ದು, ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸಿಆರ್‍ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದೆ.