×
Ad

ಕೇದಾರನಾಥ ದೇಗುಲದಲ್ಲಿ ತೆರೆದ ಬಾಗಿಲು: ಭಕ್ತರ ಪ್ರವೇಶಕ್ಕೆ ನಿರಾಕರಣೆ

Update: 2020-04-29 13:33 IST

ಉತ್ತರಾಖಂಡ,ಎ.29: ವಾರ್ಷಿಕ ತೀರ್ಥಯಾತ್ರೆಗಾಗಿ ಬುಧವಾರ ಉತ್ತರಾಖಂಡದ ಕೇದಾರನಾಥ ದೇವಾಲಯದ ಪ್ರಮುಖ ದ್ವಾರವನ್ನು ತೆರೆಯಲಾಗಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ದೇಗುಲದ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿತ್ತು.

ಶಿವ ದೇವಾಲಯದ ದ್ವಾರ ತೆರೆಯುವ ಸಂದರ್ಭದಲ್ಲಿ ದೇಗುಲದ ಅರ್ಚಕರು, ದೇವಾಲಯದ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಸೇರಿ ಸುಮಾರು 20 ಮಂದಿ ಇದ್ದರು. ಬೆಳಗ್ಗೆ 6:10ಕ್ಕೆ ದೇಗುಲದ ಬಾಗಿಲು ತೆರೆಯಲಾಗಿದ್ದು, ದೇವಾಲಯವನ್ನು ಹೂಗಳಿಂದ ಶೃಂಗರಿಸಲಾಗಿತ್ತು.

ಪ್ರಧಾನಮಂತ್ರಿ ನರೇಂದ್ರಮೋದಿ ಹೆಸರಿನಲ್ಲಿ ರುದ್ರಾಭಿಷೇಕ ನಡೆಸಲಾಯಿತು ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19ನಿಂದ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ದೇಗುಲದ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News