×
Ad

55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ

Update: 2020-04-29 17:11 IST

ಬೆಂಗಳೂರು, ಎ.29: ಕೊರೋನ ಸೋಂಕು ಹಿನ್ನೆಲೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ವಯಸ್ಸು ಹಾಗೂ ಕಾಯಿಲೆ ಹಿನ್ನೆಲೆಯುಳ್ಳವರಿಗೆ ಕೋವಿಡ್ ಬಾಧಿಸುತ್ತದೆ. ಹೀಗಾಗಿ, ಇಲಾಖೆಯ ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಕೆಲಸವಾಗಿದೆ. ಈ ಕಾರಣದಿಂದಾಗಿ 55 ವರ್ಷ ಮೇಲ್ಪಟ್ಟವರನ್ನು ರಸ್ತೆ, ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಅವರು ತಿಳಿಸಿದ್ದಾರೆ.

ಮಧುಮೇಹ, ರಕ್ತ ದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ರಸ್ತೆಯ ಮೇಲಿನ ಕರ್ತವ್ಯಗಳಿಗೆ ನಿಯೋಜಿಸಬಾರದು. ಪೊಲೀಸ್ ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ  ಹಾಕಬೇಕು ಎಂದು ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News