ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹ
Update: 2020-04-29 18:33 IST
ಮಂಗಳೂರು, ಎ.29: ನಗರದ ಕೇಂದ್ರ ಮಾರ್ಕೆಟ್‌ನ ತರಕಾರಿ ರಖಂ ವ್ಯಾಪಾರವನ್ನು ಬೈಕಂಪಾಡಿಯ ಎಪಿಎಂಸಿಗೆ ವರ್ಗಾಯಿಸಿದ್ದು ಸ್ವಾಗತಾರ್ಹ. ಆದರೆ ಅಲ್ಲಿ ಸರಿಯಾದ ವ್ಯವಸ್ಥೆ ಮಾಡದೆ ಇರುವುದು ಖಂಡನೀಯ ಎಂದು ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್‌ನ ಜಿಲ್ಲಾ ಸಂಚಾಲಕ ಅಬ್ದುಲ್ ಜಲೀಲ್ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ನೀರು, ವಿದ್ಯುತ್ ವ್ಯವಸ್ಥೆ ಇಲ್ಲ. ಇದರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಚಿಲ್ಲರೆ ವ್ಯಾಪಾರಸ್ಥರು ಸರಿಯಾದ ವ್ಯವಸ್ಥೆ ಇಲ್ಲದೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ.ಅವರಿಗೂ ಸರಿಯಾದ ವ್ಯವಸ್ಥೆ ಮಾಡಿ ಕೊಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.