ಕೊರೋನ ವೈರಸ್ : ದ.ಕ.ಜಿಲ್ಲೆಯಲ್ಲಿ 390 ವರದಿ ನೆಗೆಟಿವ್
ಮಂಗಳೂರು, ಎ.29: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಬುಧವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 390 ವರದಿಯೂ ನೆಗೆಟಿವ್ ಬಂದಿದೆ. ಇನ್ನೂ 394 ಮಂದಿಯ ವರದಿ ಬರಲು ಬಾಕಿ ಇದೆ.
ಬುಧವಾರ 70 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 39,632 ಮಂದಿಯ ಸ್ಕ್ರೀನಿಂಗ್ ಮಾಡಿ ದಂತಾಗಿದೆ. ಅಲ್ಲದೆ ಬುಧವಾರ 248 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜ್ವರ ಕ್ಲಿನಿಕ್‌ಗಳಲ್ಲಿ ಈವರೆಗೆ 1,859 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಎನ್‌ಐಟಿಕೆಯಲ್ಲಿ 59 ಮತ್ತು ಇಎಸ್‌ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.
ಈವರೆಗೆ 2,841 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 2,447 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 2,426 ಮಂದಿಯ ವರದಿಯು ನೆಗೆಟಿವ್ ಮತ್ತು 21 ಮಂದಿಯ ವರದಿಯು ಪಾಸಿಟಿವ್ ಬಂದಿದೆ. ಪಾಸಿಟಿವ್‌ಗಳ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, ದಂಪತಿ ಸಹಿತ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.19ರಂದು ಮಹಿಳೆ ಮತ್ತು ಎ.24ರಂದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
21 ಪಾಸಿಟಿವ್ ಪೈಕಿ 15 ಮಂದಿ ದ.ಕ. ಜಿಲ್ಲೆಯವರಾಗಿದ್ದಾರೆ. ಉಳಿದ 6 ಮಂದಿಯ ಪೈಕಿ 1 ಭಟ್ಕಳ, 1 ಉಡುಪಿ ಮತ್ತು 4 ಕೇರಳಕ್ಕೆ ಸೇರಿದವರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಪಿ-409 ಸಂಖ್ಯೆಯ ಕೊರೋನ ಪೀಡಿತೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.