ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರಕಾರಿ ಪಪೂ ಕಾಲೇಜು ಉಪನ್ಯಾಸಕ ಅಮಾನತು

Update: 2020-04-30 05:12 GMT

ಚಿಕ್ಕಮಗಳೂರು, ಎ.30: ಕೊರೋನ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಬಿ.ಎಸ್.ಮಂಜುನಾಥ್ ಅಮಾನತುಗೊಂಡ ಉಪನ್ಯಾಸಕ. ಚಿಕ್ಕಮಗಳೂರು ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾಗಿರುವ ಇವರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ.
‘‘ಹಲೋ ಸಿಎಂ ಸಾಹೇಬ್ರೆ ಫ್ರೀ ಇದ್ದೀರಾ..!, ಕೊರೋನ ಪರಿಹಾರಕ್ಕೆ ಜನರ ಹತ್ತಿರ ದುಡ್ಡು ಕೇಳ್ತಿದ್ದೀರಿ, ದುಡ್ಡು ಎಲ್ಲಿದೆ ಅಂತ ಲಿಸ್ಟ್ ಇಲ್ಲಿದೆ ನೋಡಿ..!’’ ಎಂದು ಮುಖ್ಯಮಂತ್ರಿ ವಿರುದ್ಧ ಆಡಿಯೋ ಕ್ಲಿಪ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಮಂಜುನಾಥ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News