×
Ad

ನಿಖಿಲ್ ವಿವಾಹ: ವಾಹನಗಳಿಗೆ ನೀಡಿದ ಪಾಸ್ ಬಗ್ಗೆ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2020-04-30 16:58 IST
ಫೈಲ್ ಚಿತ್ರ

ಬೆಂಗಳೂರು, ಎ.30: ಲಾಕ್‍ಡೌನ್ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಫಾರ್ಮ್‍ಹೌಸ್‍ನಲ್ಲಿ ನಡೆದ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ವಿವಾಹ ಸಮಾರಂಭಕ್ಕೆ ಸಂಬಂಧಿಸಿದಂತೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ವರದಿ ಸಲ್ಲಿಸಿ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ಮದುವೆಯಲ್ಲಿ ಅಂತರ ಕಾಯ್ದುಕೊಂಡಿಲ್ಲ. ಸರಕಾರ ನೀಡಿದ ವಾಹನಗಳ ಪಾಸ್ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತಂತೆ ಮೇ 5ರಂದು ಲಿಖಿತ ವರದಿ ಸಲ್ಲಿಸಿ ಎಂದು ಸರಕಾರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News