×
Ad

ಕಾಸರಗೋಡು : ಇಂದು ಓರ್ವನಲ್ಲಿ ಕೊರೋನ ವೈರಸ್ ಸೋಂಕು ದೃಢ

Update: 2020-04-30 18:09 IST

ಕಾಸರಗೋಡು : ಜಿಲ್ಲೆಯಲ್ಲಿ ಇಂದು ಓರ್ವನಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 179ಕ್ಕೆ ಏರಿದೆ. ಗುರುವಾರ ಸೋಂಕು ಪತ್ತೆಯಾದ ವ್ಯಕ್ತಿ 41 ವರ್ಷದ ಉದುಮ ನಿವಾಸಿ ಎಂದು ತಿಳಿದುಬಂದಿದೆ.

ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 12 ಮಂದಿ ಚಿಕಿತ್ಸೆಯಲ್ಲಿದ್ದು, ಉಳಿದವರು ಬಿಡುಗಡೆಗೊಂಡಿದ್ದಾರೆ. ನಿಗಾದಲ್ಲಿರುವವರ ಸಂಖ್ಯೆ 1764ಕ್ಕೆ ಇಳಿಕೆಯಾಗಿದೆ.  31 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಅವರ ವೈದ್ಯಕೀಯ ಪರೀಕ್ಷಾ ವರದಿ ನೆಗೆಟಿವ್ ಆಗಿದೆ. ಗುರುವಾರ ಸಂಜೆ ಅವರ ಗಂಟಲ ದ್ರವ ತಪಾಸಣಾ ವರದಿ ಲಭಿಸಿದ್ದು, ನೆಗೆಟಿವ್ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಪತ್ರಕರ್ತನಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್ ನಲ್ಲಿದ್ದು, ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿತ್ತು. ಸೋಂಕಿತ  ಪತ್ರಕರ್ತನ ಜೊತೆ ಸಂಪರ್ಕ ಹೊಂದಿದ್ದ ಕಾರಣ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News