ಕೊರೋನ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ

Update: 2020-04-30 14:14 GMT

ಬೆಂಗಳೂರು, ಎ.30: ಕೊರೋನ ವೈರಸ್ ಸೋಂಕಿನ(ಕೋವಿಡ್-19) ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಪೌರಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ ಕೋವಿಡ್-19 ಸೋಂಕಿಗೆ ಒಳಗಾಗಿ ಮೃತಪಟ್ಟರೆ 30ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಮೇಲ್ಕಂಡ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ವೇಳೆ ಕೊರೋನ ವೈರಸ್ ಸೋಂಕಿನಿಂದ ಸಾವನ್ನಪ್ಪಿದರೆ ಅವರಿಗೆ 30 ಲಕ್ಷ ರೂಪಾಯಿ ಪರಿಹಾರಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News