×
Ad

ಕಲಬುರಗಿ ಜಿಲ್ಲೆಯಲ್ಲಿ ಮೇ 7ರವರೆಗೆ ನಿಷೇಧಾಜ್ಞೆ ವಿಸ್ತರಣೆ

Update: 2020-04-30 20:23 IST
ಜಿಲ್ಲಾಧಿಕಾರಿ ಶರತ್

ಕಲಬುರಗಿ, ಎ.30: ಜಿಲ್ಲೆಯಲ್ಲಿ ಕೊರೋನ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜನದಟ್ಟಣೆಯನ್ನು ತಡೆಗಟ್ಟುವುದು ಅನಿವಾರ್ಯವಾಗಿರುವುದರಿಂದ ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಮೇ 7ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದ್ದಾರೆ.

ಮನೆ-ಮನೆಗೆ ಸಮೀಕ್ಷೆ: ಜಿಲ್ಲೆಯಲ್ಲಿ ಕೊರೋನ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮನೆ-ಮನೆಗೆ ಭೇಟಿ ನೀಡಿ ತೀವ್ರ ರೀತಿಯ ಆರೋಗ್ಯ ಸಮಸ್ಯೆ ಹೊಂದಿರುವವರ ಪತ್ತೆಗೆ ಸಾರ್ವತ್ರಿಕ ಸಮೀಕ್ಷೆ ನಡೆಸಲಾಗುವುದು. ಈ ಸಮೀಕ್ಷೆಯನ್ನು ಮೂರು ದಿನಗಳಲ್ಲಿ ಪೂರ್ಣಗೊಳಿಸಲು ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರು ಆರೋಗ್ಯ ಸಿಬ್ಬಂದಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ರೋಗದಿಂದ ಬಳಸಲುತ್ತಿರುವವರ ಪತ್ತೆಗೆ (health watch mobile app) ಆಪ್‍ನ್ನು ಅಭಿವೃದ್ಧಿ ಪಡಿಸಲಾಗಿದ್ದು, ಮತದಾರರ ಪಟ್ಟಿಯ ಆಧಾರದ ಮೇಲೆ ಪ್ರತಿ ಮತಗಟ್ಟೆ ಅಧಿಕಾರಿಯ ವ್ಯಾಪ್ತಿಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಸಮೀಕ್ಷಾ ಕಾರ್ಯವನ್ನು ನಡೆಸಲಾಗುತ್ತಿದೆ. ಸದರಿ ನಿಯೋಜಿತ ಮತಗಟ್ಟೆ ಅಧಿಕಾರಿ, ಶಾಲಾ ಶಿಕ್ಷಕರು ತೀವ್ರ ರೀತಿಯ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ರೋಗಿಯನ್ನು ಮುಂಚಿತವಾಗಿ ಗುರುತಿಸಿಕೊಳ್ಳಲು ಮನೆ ಮನೆಗೆ ಕುಟುಂಬಗಳ ಸಮೀಕ್ಷೆಯನ್ನು ಕೈಗೊಳ್ಳುವಾಗ ಸಹಕರಿಸಬೇಕು. ಒಂದು ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾ ಪ್ರಕಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News