ಲಾಕ್‌ಡೌನ್ ರಿಯಾಯಿತಿ: ಮಾಹಿತಿಗಾಗಿ ಸೂಚನೆ
ಉಡುಪಿ, ಎ.30: ಕೋವಿಡ್-19 ಸಂಬಂಧ ಲಾಕ್‌ಡೌನ್ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳ ಆರಂಭ ಹಾಗೂ ಅಂಗಡಿ, ಮಳಿಗೆಗಳನ್ನು ತೆರೆಯುವ ಕುರಿತಂತೆ ಈಗಾಗಲೇ ಸ್ಪಷ್ಟ ರೂಪುರೇಷೆಯೊಂದಿಗೆ ಆದೇಶವನ್ನು ಹೊರಡಿಸಲಾಗಿ ದ್ದರೂ, ಸಾರ್ವಜನಿಕರು ಸ್ಪಷ್ಟನೆಗಾಗಿ ಪದೇ ಪದೇ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ದೂರವಾಣಿ ಕರೆ ಮಾಡಿ ವಿಚಾರಿಸುತಿದ್ದಾರೆ.
ಆದುದರಿಂದ ಈ ವಿಷಯದ ಕುರಿತು ಯಾವುದೇ ಮಾಹಿತಿ ಬೇಕಾದಲ್ಲಿ ನಿಯೋಜಿತರಾಗಿರುವ ಈ ಕೆಳಗಿನ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬೇಕಾದ ಮಾಹಿತಿಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ಹೆಸರು ಮತ್ತು ದೂರವಾಣಿ ಸಂಖ್ಯೆ: ಬಾಲಕೃಷ್ಣ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಡುಪಿ (ಮೊಬೈಲ್:9448334324), ರಾನ್‌ಜಿ ನಾಯ್ಕೆ, ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಡುಪಿ (9480092738),.
ಕೈಗಾರಿಕಾ ಪ್ರದೇಶ ಹಾಗೂ ವಸಹಾತುವಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಮಾಹಿತಿ ಬೇಕಾದಲ್ಲಿ ಈ ಕೆಳಗಿನ ಅಧಿಕಾರಿಗಳನ್ನು ದೂರವಣಿ ಮೂಲಕ ಸಂಪರ್ಕಿಸಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಗೋಕುಲ್‌ದಾಸ್ ನಾಯಕ್, ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ (ಮೊ:8277052707), ಸೀತಾರಾಮ ಶೆಟ್ಟಿ, ಸಹಾಯಕ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ (9448623952).
ಗೋಕುಲ್‌ದಾಸ್ ನಾಯಕ್, ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ (ಮೊ:8277052707), ಸೀತಾರಾಮ ಶೆಟ್ಟಿ, ಸಹಾಯಕ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ (9448623952)