×
Ad

ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್: ಲೈಟ್ ಆಫ್ ಖುರ್‌ಆನ್ ಉಪನ್ಯಾಸ

Update: 2020-05-01 10:40 IST

ಮಂಗಳೂರು, ಮೇ 1: ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ವತಿಯಿಂದ ಲೈಟ್ ಆಫ್ ಖುರ್‌ಆನ್ ಉಪನ್ಯಾಸವು ಮೇ 1, ಮೇ 8, ಮೇ 15 , ಮೇ 22ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವುದು.

ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಲೈಟ್ ಆಫ್ ಖುರ್ ಆನ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ. ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ .

ರಮಝಾನ್ ತಿಂಗಳ ಪ್ರತೀ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸಿಲ್ ಸಿಲಾ ಮೀಡಿಯಾದಲ್ಲಿ ಪ್ರಸಾರವಾಗಲಿದೆ ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News