×
Ad

​ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ 78 ಕಟ್ಟಡ ‌ಕಾಮಗಾರಿಗಳಿಗೆ ಅನುಮತಿ: ಡಿಸಿ

Update: 2020-05-01 20:26 IST

ಮಂಗಳೂರು, ಮೇ 1: ಕೊರೋನ- ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ಕಟ್ಟಡ ನಿರ್ಮಾಣ ಕಾಮಗಾರಿಗಳ ಪೈಕಿ‌ 78 ಕಾಮಗಾರಿಗಳಿಗೆ ಷರತ್ತು ಬದ್ದ ಅನುಮತಿ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಅನೇಕ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಸರಕಾರದ ನಿರ್ದೇಶನದಂತೆ ಕಟ್ಟಡ ಕಾಮಗಾರಿ ಆರಂಭಿಸಲು ಅನುಮತಿ ನೀಡಲಾಗಿದೆ.‌ ಆ ಪೈಕಿ 4 ಕಾಮಗಾರಿ ಆರಂಭಗೊಂಡಿದೆ. ಉಳಿದವುಗಳಿಗೆ ಸಿದ್ಧತೆ ನಡೆದಿದೆ ಎಂದು ಡಿಸಿ ತಿಳಿಸಿದ್ದಾರೆ. ಕಾರ್ಮಿಕರು ಕಟ್ಟಡ ನಿರ್ಮಾಣ ಸ್ಥಳದಲ್ಲೇ ಇರಬೇಕು. ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು, ಕೊರೋನ ವೈರಸ್ ರೋಗ ಹರಡದಂತೆ‌ ಮುನ್ನೆಚ್ಚರಿಕೆ ವಹಿಸಬೇಕು, ಒಬ್ಬ ಪ್ರಾಜೆಕ್ಡ್ ಮ್ಯಾನೇಜರ್‌ರನ್ನು ನೇಮಿಸಬೇಕು, ಸಂಬಂಧಪಟ್ಟ ಇಲಾಖೆಯು ಕೋರುವ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ. ಸ್ಥಗಿತಗೊಂಡಿದ್ದ ಕಾಮಗಾರಿ ಪುನರಾರಂಭಿಸಲು ಪರವಾನಿಗೆದಾರರು bit.ly/dkdpermit ಇದರ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು ಎಂದು ಡಿಸಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News