×
Ad

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Update: 2020-05-02 23:11 IST

ಬೆಂಗಳೂರು, ಮೇ 2: ನಿರ್ಮಾಣ ಹಂತದ ಕಟ್ಟಡ ಮೇಲಿಂದ ಕಾರ್ಮಿಕನೋರ್ವ ಬಿದ್ದು ಮೃತಪಟ್ಟಿರುವ ಘಟನೆ ಇಲ್ಲಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಅಜ್ಗರ್ ಮಂಡಲ(46) ಮೃತ ಕಾರ್ಮಿಕ ಎಂದು ತಿಳಿದುಬಂದಿದೆ.

ಅಜ್ಗರ್, ಸಂಬಂಧಿಕರ ಜೊತೆ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಇ-ಮುದ್ರಾ ಕಂಪೆನಿಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾಪೆರ್ಂಟರ್ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಈ ಸಂಬಂಧ ಇ–ಮುದ್ರಾ ಕಂಪೆನಿ ಚೇರ್ಮನ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News