×
Ad

ಸವಿತಾ ಸಮಾಜದ 2000 ಮಂದಿಗೆ ಉಚಿತ ಆಹಾರ ಕಿಟ್ ವಿತರಣೆ

Update: 2020-05-03 18:11 IST

ಉಡುಪಿ, ಮೇ 3: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಉಡುಪಿ ಜಿಲ್ಲೆಯ ಸವಿತಾ ಸಮಾಜದ 2000 ಮಂದಿಗೆ ಡಾ.ಜಿ.ಶಂಕರ್ ಶ್ಯಾಮಿಲಿ ಟ್ರಸ್ಟ್ ವತಿಯಿಂದ ನೀಡಲಾದ ಉಚಿತ ಆಹಾರದ ಕಿಟ್‌ಗಳನ್ನು ಜಿಲ್ಲಾಡಳಿತ ಮೂಲಕ ರವಿವಾರ ಉಡುಪಿ ತಾಲೂಕು ಕಚೇರಿಯಲ್ಲಿ ವಿತರಿಸಲಾಯಿತು.

ಆಹಾರದ ಕಿಟ್ ವಿತರಿಸಿದ ಡಾ.ಜಿ.ಶಂಕರ್ ಮಾತನಾಡಿ, ಲಾಕ್‌ಡೌನ್ ಆರಂಭವಾದ ಕೂಡಲೇ ಜಿಲ್ಲಾಡಳಿತ ಮನವಿ ಮೇರೆಗೆ ಅಗತ್ಯವಿರುವ ಮಾಸ್ಕ್ ಮತ್ತು ಪಿಪಿಟಿ ಕಿಟ್ ಸೇರಿದಂತೆ ಆರೋಗ್ಯ ಇಲಾಖೆಗೆ ಅಗತ್ಯವಿದ್ದ ಸಾಮಾಗ್ರಿ ಗಳನ್ನು ಟ್ರಸ್ಟ್ ವತಿಯಿಂದ ನೀಡಲಾಗಿದೆ. ಈವರೆಗೆ 1.5 ಲಕ್ಷ ಮಾಸ್ಕ್‌ಗಳು ಮತ್ತು 25,000ಕ್ಕೂ ಅಧಿಕ ಆಹಾರದ ಕಿಟ್‌ಗಳನ್ನು 125000ಕ್ಕೂ ಅಧಿಕ ಫಲಾನುಭವಿಗಳಿಗೆ ಜಿಲ್ಲಾಡಳಿತದ ಮೂಲಕ ವಿತರಿಸಲಾಗಿದೆ ಎಂದರು.

ಪ್ರಸ್ತುತ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್‌ನಲ್ಲಿರುವ ಅತ್ಯಂತ ಕಡು ಬಡವರನ್ನು ಗುರುತಿಸಿ ಆಹಾರದ ಕಿಟ್ ವಿತರಣೆ ಮಾಡಲು ಕ್ರಮ ಕೈಗೊಳ್ಳ ಲಾಗಿದೆ. ಸಂಕಷ್ಟದ ಸಮಯದಲ್ಲಿ ಸಮಾಜಕ್ಕೆ ಅಗತ್ಯ ನೆರವು ನೀಡಲು ತಮ್ಮ ಟ್ರಸ್ಟ್ ಯಾವಾಗಲೂ ಸಿದ್ದ ಇದೆ. ಕೊರೋನಾ ವಿರುದ್ದದ ಹೋರಾಟದಲ್ಲಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯ ದಾನಿಗಳು ನೀಡಿದ ನೆರವಿನಿಂದ ಜಿಲ್ಲೆಯಲ್ಲಿನ ನಿರಾಶ್ರಿತರಿಗೆ ಮತ್ತು ಸಂಕಷ್ಟದಲ್ಲಿದ್ದವರಿಗೆ ಅಗತ್ಯವಿದ್ದ ಸೌಲಭ್ಯ ಒದಗಿಸಲು ಸಾದ್ಯವಾಗಿದೆ. ದಾನಿಗಳು ಉದಾರವಾಗಿ ನೆರವು ನೀಡಿ ದ್ದರಿಂದ ಜಿಲ್ಲಾಡಳಿತದ ಹಣ ಬಳಸುವ ಅಗತ್ಯವೇ ಕಂಡು ಬಂದಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ದಲ್ಲಿ ಸವಿತಾ ಸಮಾಜದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News