ಮಾಸ್ಕ್ ಇಲ್ಲದೆ ಹೊರಬಂದರೆ ಬೀಳಲಿದೆ ದಂಡ: ಆರೋಗ್ಯ ಇಲಾಖೆ ಆದೇಶ

Update: 2020-05-03 15:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ. 3: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ವೇಳೆ ಜನರು ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಜನರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ಮತ್ತು ಮಾಸ್ಕ್ ಧರಿಸಬೇಕು. ಒಂದು ವೇಳೆ ಈ ನಿಯಮ ಉಲ್ಲಂಘನೆ ಮಾಡುವವರಿಗೆ ಬೀಳಲಿದೆ ದುಬಾರಿ ಮೊತ್ತದ ದಂಡ. ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಉಳಿದ ಪಾಲಿಕೆಗಳು ಮಾಸ್ಕ್ ದಂಡ ಪ್ರಕಟಿಸಿವೆ.

ಪುರಸಭೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದರೆ 200 ರೂ. ಮತ್ತು ಉಳಿದ ಪ್ರದೇಶಗಳಲ್ಲಿ 100 ರೂ.ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸಬ್ ಇನ್ಸ್‍ಪೆಕ್ಟರ್(ಎಸ್ಸೈ) ಹಂತದ ಮತ್ತು ಅವರಿಗಿಂತ ಮೇಲಿನ ಅಧಿಕಾರಿಗಳು, ಪುರಸಭೆ ಆರೋಗ್ಯಾಧಿಕಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಮತ್ತು ಸರಕಾರ ಸೂಚಿಸಿರುವ ಇತರೆ ಅಧಿಕಾರಿಗಳು ದಂಡವನ್ನು ವಸೂಲಿ ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News