ಲಾಕ್‍ಡೌನ್: ಯಾವ ಝೋನ್ ನಲ್ಲಿ ಯಾವ್ಯಾವ ಜಿಲ್ಲೆಗಳು ? ಇಲ್ಲಿದೆ ಮಾಹಿತಿ...

Update: 2020-05-03 16:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ. 3: ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಹೇರಿರುವ ಲಾಕ್‍ಡೌನ್ ಅನ್ನು 'ಕಂಟೈನ್ಮೆಂಟ್ ಝೋನ್'ನಲ್ಲಿ ನಾಳೆ(ಮೇ 4)ಯಿಂದ ಇನ್ನೂ ಎರಡು ವಾರಗಳ ಕಾಲ (ಮೇ 17) ವಿಸ್ತರಿಸಲಾಗಿದ್ದು, ಲಾಕ್‍ಡೌನ್ ಕ್ರಮಗಳ ಬಗ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

ಹೊಸ ಮಾರ್ಗಸೂಚಿಯನ್ವಯ ಕೆಂಪು ವಲಯ, ಕಿತ್ತಳೆ ವಲಯ ಮತ್ತು ಹಸಿರು ವಲಯ ಎಂದು ಮೂರು ಭಾಗಗಳಾಗಿ ವಿಂಗಡಿಸಿದ್ದು, ಕೆಂಪು ವಲಯದಲ್ಲಿ ಬೆಂಗಳೂರು ನಗರ, ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಇವೆ.

ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ, ಉತ್ತರ ಕನ್ನಡ ಮತ್ತು ತುಮಕೂರು ಜಿಲ್ಲೆಗಳಿವೆ.

ಹಸಿರು ವಲಯ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ ಮತ್ತು ಯಾದಗಿರಿ ಜಿಲ್ಲೆಗಳಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News