×
Ad

ಕೊರೋನ ವೈರಸ್: ಬಿಬಿಎಂಪಿ ವ್ಯಾಪ್ತಿಯಲ್ಲಿ 72 ಮಂದಿ ಗುಣಮುಖ

Update: 2020-05-03 22:36 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 3: ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲಿಯವರಿಗೆ 149 ಕೊರೋನ ವೈರಸ್ ಸೋಂಕಿತ ಪ್ರಕರಣ ದೃಢಪಟ್ಟಿದ್ದು, 149ಜನರ ಪೈಕಿ 72 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಗರದಲ್ಲಿ 70 ಜನರಿಗೆ ಸಕ್ರಿಯವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಲ್ಲಿಯವರಿಗೆ 6 ಜನರು ಮೃತಪಟ್ಟಿದ್ದಾರೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯಗಳಲ್ಲಿ ಒಟ್ಟು 6,316 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವ ಒಟ್ಟು 1,051 ಜನರು ಹಾಗೂ ದ್ವಿತೀಯ ಸಂಪರ್ಕದಲ್ಲಿರುವ 4,584 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನು ಪ್ರಾಥಮಿಕ ಸಂಪರ್ಕದಲ್ಲಿರುವ 498 ಮಂದಿ ಕ್ವಾರಂಟೈನ್ ಪೂರ್ಣಗೊಳಿಸಿದ್ದು, 553 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕದಲ್ಲಿರುವ 3,840 ಜನರು ಕ್ವಾರಂಟೈನ್ ಪೂರ್ಣಗೊಳಿಸಿದ್ದು, 744 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಬಿಬಿಎಂಪಿಯ 198 ವಾರ್ಡ್‍ಗಳ ಪೈಕಿ 21 ವಾರ್ಡ್‍ಗಳಲ್ಲಿ ಮಾತ್ರವೇ ಕಂಟೈನ್‍ಮೆಂಟ್ ಜೋನ್ ಮಾಡಲಾಗಿದೆ, ಇನ್ನು ಉಳಿದ 173 ವಾರ್ಡ್‍ಗಳಲ್ಲಿ ಗ್ರೀನ್ ಜೋನ್ ಮಾಡಲಾಗಿದೆ, ಈ ಬಗ್ಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಸಡಿಲಿಕೆ ಮಾಡಲು ಕೋರಿಕೊಳ್ಳಲಾಗುವುದು.

-ಬಿ.ಹೆಚ್. ಅನಿಲ್ ಕುಮಾರ್, ಬಿಬಿಎಂಪಿ ಆಯುಕ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News