×
Ad

ಜೆಇಇ-ನೀಟ್ ಪರೀಕ್ಷಾ ದಿನಾಂಕ ಮೇ 5ರಂದು ಪ್ರಕಟ

Update: 2020-05-03 22:59 IST

ಹೊಸದಿಲ್ಲಿ, ಮೇ3: ಜೆಇಇ ಹಾಗೂ ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳ ನೂತನ ದಿನಾಂಕಗಳನ್ನು ಮೇ 5ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಮಾನವಸಂಪನ್ಮೂಲ ಸಚಿವಾಲಯ ರವಿವಾರ ತಿಳಿಸಿದೆ. ಇದರಿಂದಾಗಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದ ಆಕಾಂಕ್ಷಿಗಳಿಗೆ ಸಮಾಧಾನದ ನಿಟ್ಟುಸಿರೆಳೆಯುವಂತಾಗಿದೆ.

ಕೋವಿಡ್-19 ಹರಡುವಿಕೆಯನ್ನು ತಡೆಯಲು ರಾಷ್ಟ್ರಾದ್ಯಂತ ಲಾಕ್‌ಡೌನ್ ಹೇರಿದ್ದರಿಂದ ನೀಟ್ ಹಾಗೂ ಜೆಇಇಟಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

‘‘ಜೆಇಇಟಿ, ನೀಟ್ ಪರೀಕ್ಷೆಗಳ ಹೊಸ ದಿನಾಂಕಗಳನ್ನು ಕೇಂದ್ರ ಮಾನವ ಸಂಪನ್ಮೂಲ ಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮೇ 5ರಂದು ಪ್ರಕಟಿಸಿದ್ದಾರೆ. ಇದರಿಂದಾಗಿ ಪ್ರವೇಶಾಕಾಂಕ್ಷಿಗಳನ್ನು ಕಾಡುತ್ತಿದ್ದ ಅನಿಶ್ಚಿತತೆ ಕೊನೆಗೊಂಡಿದೆ. ಆ ದಿನವೇ ಮಾನ್ಯ ಸಚಿವರು ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಂವಾದ ನಡೆಸಲಿದ್ದಾರೆ’’ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಸಿದ್ದಾರೆ.

ದೇಶಾದ್ಯಂತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ-ಮೇನ್ಸ್ ) ಹಾಗೂ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ ) ಪರೀಕ್ಷೆ ಆಯೋಜಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News