×
Ad

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೇ 17ರವರೆಗೆ ನಿಷೇದಾಜ್ಞೆ ಜಾರಿ

Update: 2020-05-04 19:34 IST

ಚಿಕ್ಕಮಗಳೂರು, ಮೇ 4: ಕೊರೋನಾ ಸೋಂಕು ತಡೆಗಟ್ಟುವ ಹಾಗೂ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಲಾಕ್‍ಡೌನ್ ಆದೇಶವನ್ನು ಇಂದಿನಿಂದ ಎರಡು ವಾರಗಳ ಅವಧಿಗೆ ವಿಸ್ತರಿಸಿ ರಾಜ್ಯ ಸರ್ಕಾರದ ಉಲ್ಲೇಖದಂತೆ ಆದೇಶ ಹೊರಡಿಸಿ ಹೊಸ ಮಾರ್ಗಸೂಚಿ 5ರ ಉಪಕ್ರಮ ಸಂಖ್ಯೆ(1) ರಲ್ಲಿ ನಿರ್ದೇಶಿಸಿರುವಂತೆ ಜಿಲ್ಲೆಯಾದ್ಯಂತ ಮೇ.04 ರಿಂದ ಮೇ.17 ರವರೆಗೆ ಪ್ರತಿದಿನ ಸಂಜೆ 7.00 ಗಂಟೆಯಿಂದ ಬೆಳಗ್ಗೆ 7.00 ಗಂಟೆವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144 ರಡಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಆದೇಶಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಯಾವುದೇ ಕಾರಣಕ್ಕೂ 5 ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯ ಚಟುವಟಿಕೆಗಳಿಗಾಗಿ ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದ್ದು ಈ ಆದೇಶ ಮದುವೆ ಹಾಗೂ ಅಂತ್ಯ ಸಂಸ್ಕಾರ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News