×
Ad

ಸಮಗ್ರ ಶಿಕ್ಷಣ ಯೋಜನೆಯಡಿ ಶಿಕ್ಷಕರ ವೇತನ ಬಿಡುಗಡೆ

Update: 2020-05-04 20:58 IST

ಬೆಂಗಳೂರು, ಮೇ 4: 2020-21ನೆ ಸಾಲಿನ ಆಯವ್ಯಯದಲ್ಲಿ ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಎಪ್ರಿಲ್ ತಿಂಗಳ ವೇತನವನ್ನು ಬಿಡುಗಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೋವಿಡ್-19 ವೈರಾಣು ಸೋಂಕು ಇರುವ ಹಿನ್ನೆಲೆಯಲ್ಲಿ ಸರಕಾರಿ ಆದೇಶದಲ್ಲಿ ನಿಗದಿಪಡಿಸಿದ ಮಿತವ್ಯಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಕಡ್ಡಾಯವಾಗಿ ಎಪ್ರಿಲ್ ತಿಂಗಳ ವೇತನವನ್ನು ಸೆಳೆಯಲು ಮಾತ್ರ ಬಳಸಬೇಕು. ಯಾವುದೆ ಕಾರಣಕ್ಕೂ ಹಿಂದಿನ ವೇತನ ಬಾಕಿ ಬಿಲ್ಲಿನ ಅನುದಾನವನ್ನು ಸೆಳೆಯಲು ಈ ಅನುದಾನವನ್ನು ಉಪಯೋಗಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News