ಅಂತರ್ ರಾಜ್ಯ ವಲಸೆ ಕಾರ್ಮಿಕರಿಗೆ ಉಚಿತ ರೈಲ್ವೆ ವ್ಯವಸ್ಥೆ ಕಲ್ಪಿಸಿ

Update: 2020-05-04 16:54 GMT

ಬೆಂಗಳೂರು, ಮೇ 4: ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಕೆಎಸ್ಸಾರ್ಟಿಸಿ ಬಸ್‍ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡಿರುವುದನ್ನು ಸ್ವಾಗತಿಸಿರುವ ಹೈಕೋರ್ಟ್ ವಕೀಲ ಕ್ಲಿಪ್ಟನ್ ರೋಜಾರಿಯೊ ಅವರು, ಅಂತರ್ ರಾಜ್ಯ ವಲಸೆ ಕಾರ್ಮಿಕರಿಗೂ ರೈಲ್ವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಈಗಾಗಲೇ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಸರಕಾರ ಕೂಡ ಬಸ್ ಪ್ರಯಾಣದ ಸೌಲಭ್ಯವನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಿದ್ದಾರೆ. ಇದೇ ರೀತಿಯಾಗಿ ಅಂತರ್ ರಾಜ್ಯ ವಲಸೆ ಕಾರ್ಮಿಕರಿಗೂ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. 

ವಲಸೆ ಕಾರ್ಮಿಕರನ್ನು ಊರುಗಳಿಗೆ ಕರೆದೊಯ್ಯಲು ರೈಲ್ವೆ ಇಲಾಖೆ ವ್ಯವಸ್ಥೆ ಮಾಡಿರುವ ವಿಶೇಷ ರೈಲುಗಳ ಟಿಕೆಟ್ ದರದಲ್ಲಿ ಸ್ವಲ್ಪಮಟ್ಟಿನ ರಿಯಾಯಿತಿ ನೀಡಲಾಗಿದೆ. ಉಳಿದ ಹಣವನ್ನು ಆಯಾ ರಾಜ್ಯ ಸರಕಾರಗಳು ನೀಡಲಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News