×
Ad

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನಿಂದ ಅಕ್ಕಿ, ದಿನಸಿವಸ್ತು ವಿತರಣೆ

Update: 2020-05-06 18:15 IST

 ಉದ್ಯಾವರ, ಮೇ 6: ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿ ಕೊಡಮಾಡಿದ ಒಂದು ಟನ್ ಅಕ್ಕಿ ಮತ್ತು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ದಾನಿಗಳ ಸಹಾಯದಿಂದ ಸಂಗ್ರಸಿದ ದಿನಸಿ ವಸ್ತುಗಳನ್ನು ಗ್ರಾಪಂ ಸದಸ್ಯರ ಮತ್ತು ವಾರ್ಡ್ ಅಧ್ಯಕ್ಷರ ಮೂಲಕ ಅತಿ ಅಗತ್ಯರುವ 200 ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನೂ 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಯೋಜನೆಯನ್ನು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಕಿಕೊಂಡಿದೆ.

 ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭ ದಲ್ಲಿ ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಭಾಗವಹಿಸಿದ್ದರು. ಕಾಂಗ್ರೆಸ್ ಆಡಳಿತವಿರುವ ಗ್ರಾಪಂಗಳ ನೇತೃತ್ವದಲ್ಲಿ ಜಾತಿ, ಮತ ಮತ್ತು ಪಕ್ಷ ಭೇದಲ್ಲದೆ ಹಾಲು, ತರಕಾರಿ, ಅಕ್ಕಿ ವಿತರಣೆ ಮಾಡುತ್ತಿದ್ದೇವೆ. ಕಾಪು ವಿಧಾನಸಭಾ ಕ್ಷೇತ್ರ ದಲ್ಲಿ ಈಗಾಗಲೇ 12ಸಾವಿರ ಕಿಟ್‌ಗಳನ್ನು ವಿತರಿಸಲಾಗಿದೆ ಎಂದವರು ನುಡಿದರು.

ಉದ್ಯಾವರ ಗ್ರಾಮದ 13 ಬೂತ್ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಿಗೆ ತಮ್ಮ ಬೂತಿನ ಅರ್ಹ ಸಂತ್ರಸ್ಥರಿಗೆ ವಿತರಿಸಲು ಕಿಟ್‌ಗಳನ್ನು ಅವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯದ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್, ಉಪಾಧ್ಯಕ್ಷ ರಿಯಾಜ್ ಪಳ್ಳಿ, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್‌ಕುಮಾರ್, ಲಾರೆನ್ಸ್ ಡೇಸಾ ಉಪಸ್ಥಿತರಿದ್ದರು.

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬಿದ್ ಆಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News