ನಮ್ಮ ಮೆಟ್ರೊ ಕಾರ್ಮಿಕರ ವೇತನ ವಿಚಾರ: ಸರಕಾರ, ಬಿಎಂಆರ್ ಸಿಎಲ್‍ಗೆ ಹೈಕೋರ್ಟ್ ನೋಟಿಸ್
Update: 2020-05-06 18:21 IST
ಬೆಂಗಳೂರು, ಮೇ 6: ನಮ್ಮ ಮೆಟ್ರೊ ಕಾರ್ಮಿಕರ ವೇತನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ(ಬಿಎಂಆರ್‍ಸಿಎಲ್) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಆಕ್ಷೇಪಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆಗೆ ವಿವರಣೆ ನೀಡಿ ಎಂದು ಪ್ರತಿವಾದಿಗಳಿಗೆ ನಿರ್ದೇಶಿಸಿ ನ್ಯಾಯಪೀಠ, ವಿಚಾರಣೆಯನ್ನು ಮೇ 12ಕ್ಕೆ ಮುಂದೂಡಿದೆ.
ಮೆಟ್ರೊ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ ಮತ್ತು ಅವರನ್ನು ಅವರ ಸ್ವಂತ ರಾಜ್ಯಗಳಿಗೆ ಕಳಿಸಿಕೊಡುತ್ತಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.