ರಾಜ್ಯದ ಆರ್ಥಿಕ ಪರಿಸ್ಥಿತಿಯ ಅವಲೋಕನಕ್ಕೆ ವಿಶೇಷ ಅಧಿವೇಶನ ಕರೆಯಿರಿ: ಡಿಕೆಶಿ ಮನವಿ

Update: 2020-05-06 13:09 GMT

ಬೆಂಗಳೂರು, ಮೇ 6: ರಾಜ್ಯದ ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸುವ ಸಲುವಾಗಿ ರಾಜ್ಯ ಸರಕಾರ ಕೂಡಲೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಬುಧವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರಮಿಕರ ಪರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಅಭಿನಂದಿಸುತ್ತದೆ. ರೈತರಿಗೆ, ಕಾರ್ಮಿಕರಿಗೆ, ವೃತ್ತಿಯಾಧಾರಿತ ಕುಶಲಕರ್ಮಿಕರ ಪರವಾದಂತಹ ಯಾವುದೇ ತೀರ್ಮಾನಗಳನ್ನು ಕೆಪಿಸಿಸಿ ಸಂಪೂರ್ಣವಾಗಿ ಬೆಂಬಲಿಸುತ್ತದೆಂದು ತಿಳಿಸಿದ್ದಾರೆ.

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸಂಕಷ್ಟದಲಿದ್ದು, ಅವರಿಗೆ ಆರ್ಥಿಕ ನೆರವಿನ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಅಧಿವೇಶನವು ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ಆ ಮೂಲಕ ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News