ನೇಣು ಬಿಗಿದು ಆತ್ಮಹತ್ಯೆ

Update: 2020-05-06 16:24 GMT

ಅಮಾಸೆಬೈಲು, ಮೇ 6: ಕಳೆದ 25 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಮಹಿಳೆಯೊಬ್ಬರು ಇಂದು ಬೆಳಗ್ಗೆ ಮನೆಯ ಬಚ್ಚಲ ಮನೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕುಂದಾಪುರ ತಾಲೂಕು ಮಚ್ಚಟ್ಟು ಗ್ರಾಮದ ತೊಂಬಟ್ಟು ಮಾರಿಪಾಲು ಸದಾಶಿವ ಶೆಟ್ಟಿ ಅವರ ಪತ್ನಿ ಸಹದೇವಿ (57) ಎಂದು ಗುರುತಿಸಲಾಗಿದೆ.

ಸಹದೇವಿ ಶೆಟ್ಟಿ ಕಳೆದ 25 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತಿದ್ದರು. ಇಂದು ಬೆಳಗ್ಗೆ 11:30ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಅವರು  ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News