×
Ad

ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುವೆ: ಆಂಧ್ರ ಅನಿಲ ಸೋರಿಕೆ ಬಗ್ಗೆ ಪ್ರಧಾನಿ ಪ್ರತಿಕ್ರಿಯೆ

Update: 2020-05-07 12:36 IST

ಹೊಸದಿಲ್ಲಿ, ಮೇ 7: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವ ರಾಸಾಯನಿಕ ಸ್ಥಾವರದಲ್ಲಿ ಅನಿಲ ಸೋರಿಕೆಯ ಘಟನೆಯಿಂದ ಬಾಧಿತರಾಗಿರುವ ಪ್ರತಿಯೊಬ್ಬರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ದಕ್ಷಿಣ ರಾಜ್ಯದಲ್ಲಿನ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಪರಾಮರ್ಶಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ)ದೊಂದಿಗೆ ಪ್ರಧಾನಮಂತ್ರಿ ಇಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಸಿದರು.

ಗೃಹ ಸಚಿವಾಲಯ, ಎನ್‌ಡಿಎಂಎ ಅಧಿಕಾರಿಗಳೊಂದಿಗೆ ವಿಶಾಖಪಟ್ಟಣದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ನಿಗಾವಹಿಸಲಾಗಿದೆ. ನಾನು ವಿಶಾಖಪಟ್ಟಣದ ಪ್ರತಿಯೊಬ್ಬರ ಸುರಕ್ಷತೆಯ ಬಗ್ಗೆ ಪ್ರಾರ್ಥಿಸುವೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News