ಬೆಳಗಾವಿ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದಲಿತ ಯುವ ವೇದಿಕೆ ಅಧ್ಯಕ್ಷನ ಹತ್ಯೆ

Update: 2020-05-07 11:03 GMT
ಸಾಂದರ್ಭಿಕ ಚಿತ್ರ

ಬೆಳಗಾವಿ, ಮೇ 7: ದಲಿತ ಸಂಘಟನೆಯ ಅಧ್ಯಕ್ಷನೋರ್ವನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೋಕಾಕ ನಗರದ ಆದಿಜಾಂಬವ ನಗರದ ನಿವಾಸಿ ಆಗಿರುವ ದಲಿತ ಯುವ ವೇದಿಕೆ ಸ್ಥಾಪಕ ಅಧ್ಯಕ್ಷ ಸಿದ್ದು ಅರ್ಜುನ ಕಣಮಡ್ಡಿ(27) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಘಟನೆಗೆ ಹಳೇ ದ್ವೇಷವೇ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News