×
Ad

ಅನಿವಾಸಿ ಕನ್ನಡಿಗರ ನೆರವಿಗೆ ಮನವಿ

Update: 2020-05-07 18:02 IST

ಮಂಗಳೂರು, ಮೇ 7: ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಕನ್ನಡಿಗರು ವಾಪಸ್ ಬರಲು ರಾಜ್ಯ ಸರಕಾರವು ಕೇಂದ್ರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ. ತೌಫೀಕ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಸಾವಿರಾರು ಜನರು ವಿದೇಶದಲ್ಲಿ ಅತಂತ್ರರಾಗಿದ್ದಾರೆ. ಲಾಕ್‌ಡೌನ್‌ನಿಂದ ತತ್ತರಿಸಿರುವ ಬಹುತೇಕ ಮಂದಿ ಮಾನಸಿಕವಾಗಿಯೂ ಜರ್ಜರಿತರಾಗಿದ್ದಾರೆ. ವಿಶ್ವದಾದ್ಯಂತದ ಅನಿವಾಸಿ ಭಾರತೀಯರಿಗೆ ಶುಲ್ಕ ರಹಿತ ಪ್ರಯಾಣದ ಕೊಡುಗೆಯನ್ನು ಕೇಂದ್ರ ಸರಕಾರ ನೀಡಿತ್ತು. ಆದರೆ ಈಗ ಟಿಕೆಟ್ ಹಣ ಭರಿಸಲು ತಿಳಿಸಿದೆ. ಇದರಿಂದ ಅನಿವಾಸಿ ಕನ್ನಡಿಗರಿಗೆ ತೊಂದರೆಯಾಗಲಿದೆ. ಹಾಗಾಗಿ ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News