ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿಯ ಕೊಲೆ
Update: 2020-05-08 17:06 IST
ಬೆಂಗಳೂರು, ಮೇ 8: ಮದ್ಯದ ಅಮಲಿನಲ್ಲಿ ರೌಡಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಟರಾಯನಪುರ ನಿವಾಸಿ ಅಶೋಕ್(25) ಕೊಲೆಯಾದ ರೌಡಿ ಎಂದು ಪೊಲೀಸರು ಗುರುತಿಸಿದ್ದಾರೆ.
ಗುರುವಾರ ರಾತ್ರಿ ಇಲ್ಲಿನ ಮಾರುತಿನಗರದ 11ನೆ ಕ್ರಾಸ್, ಬಾಪೂಜಿ ನಗರದಲ್ಲಿ ನಡೆದು ಹೋಗುತ್ತಿದ್ದಾಗ ಮದ್ಯದ ಅಮಲಿನಲ್ಲಿದ್ದ ದುಷ್ಕರ್ಮಿಗಳು ಏಕಾಏಕಿ ಅಶೋಕ್ ಮೇಲೆ ಮಾರಕಾಸ್ತ್ರಗಳಿಂದ ದಾಳಿನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬ್ಯಾಟರಾಯನಪುರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.