ಜೂಜು ಅಡ್ಡೆಗಳ ಮೇಲೆ ಸಿಸಿಬಿ ದಾಳಿ: 15 ಜನರ ಬಂಧನ, 1.40 ಲಕ್ಷ ನಗದು ಜಪ್ತಿ

Update: 2020-05-08 11:37 GMT

ಬೆಂಗಳೂರು, ಮೇ 8: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 15 ಜನರನ್ನು ಬಂಧಿಸಿ, 1.40 ಲಕ್ಷ ರೂ. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಬನಶಂಕರಿ ಹಾಗೂ ಮಾರತ್‍ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News