×
Ad

ರಾಜ್ಯದಲ್ಲಿ ಇಂದು ಒಟ್ಟು 48 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ

Update: 2020-05-08 17:32 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 8: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ಗುರುವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ಒಟ್ಟು 48 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿರುವ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಈ ಪೈಕಿ ದಾವಣಗೆರೆಯಲ್ಲಿ 14, ಭಟ್ಕಳದಲ್ಲಿ 12, ಬೆಳಗಾವಿಯಲ್ಲಿ 11, ಬೆಂಗಳೂರು ನಗರದಲ್ಲಿ 7 ಮತ್ತು ಚಿತ್ರದುರ್ಗದಲ್ಲಿ 3, ಬಳ್ಳಾರಿಯಲ್ಲಿ ಒಂದು ಸೋಂಕು ಪ್ರಕರಣ ಪತ್ತೆಯಾಗಿದೆ.

ಭಟ್ಕಳದಲ್ಲಿ 5 ತಿಂಗಳ ಹಸುಗೂಸು, 3 ವರ್ಷದ ಬಾಲಕಿ ಸಹಿತ 12 ಮಂದಿಗೆ, ದಾವಣಗೆರೆಯಲ್ಲಿ 6 ಮಕ್ಕಳ ಸಹಿತ 14 ಮಂದಿಗೆ ಸೋಂಕು ದೃಢಪಟ್ಟಿದೆ. 

ರಾಜ್ಯದ ಒಟ್ಟು 753 ಸೋಂಕಿತರ ಪೈಕಿ 376 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 30 ಮಂದಿ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News