ಸಹಾಯಧನ ಘೋಷಣೆ: ಆಟೋ, ಟ್ಯಾಕ್ಸಿ ಚಾಲಕರಿಂದ ಅರ್ಜಿ ಆಹ್ವಾನ

Update: 2020-05-08 12:28 GMT

ಬೆಂಗಳೂರು, ಮೇ 8: ಕೊರೋನ ಲಾಕ್‍ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಟ್ಯಾಕ್ಸಿ, ಕ್ಯಾಬ್ ಮತ್ತು ಆಟೋ ಚಾಲಕರಿಗೆ 5 ಸಾವಿರ ರೂ, ಸಹಾಯಧನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದು, ಘೋಷಣೆಯಾದ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಬೇಕಾದ ಅಂತರ್ಜಾಲದ ವಿಳಾಸ: https://sevasindhu.karnataka.gov.in ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News