ಮಡಿಕೇರಿ: ಸಿಡಿಲು ಬಡಿದು ಮಹಿಳೆಗೆ ಗಾಯ
Update: 2020-05-08 20:12 IST
ಮಡಿಕೇರಿ, ಮೇ.8: ಕೊಡಗು ಜಿಲ್ಲೆಯ ವಿವಿಧೆಡೆ ಕಳೆದ ಒಂದು ವಾರದಿಂದ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗುತ್ತಿದೆ. ಇಂದು ಸಿಡಿಲು ಬಡಿದು ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ವಿರಾಜಪೇಟೆ ಸಮೀಪದ ಕೆದಮಳ್ಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ಮಿಕ ನಾರಾಯಣ ಎಂಬುವವರ ಪತ್ನಿ ಯಶೋಧ(45) ಅವರಿಗೆ ಕೈ ಮತ್ತು ಮುಖ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ವಿರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.