ಮಂಡ್ಯ: ಏಕರೂಪ ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ

Update: 2020-05-08 16:48 GMT

ಮಂಡ್ಯ, ಮೇ8: ಏಕರೂಪ ಶುಲ್ಕ, ಏಕರೂಪ ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ನ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಹಾಗೂ ನಿವಾಸಿ ವೈದ್ಯರು ಸಂಸ್ಥೆ ಎದುರು ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಶುಲ್ಕವನ್ನು ಕರ್ನಾಟದಲ್ಲಿ ವಿಧಿಸಲಾಗುತ್ತಿದೆ. ಆದರೆ, ಕಡಿಮೆ ಶಿಷ್ಯವೇತನ ನೀಡಲಾಗುತ್ತಿದೆ. ಇದರಿಂದ ವೈದ್ಯ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಅವರು ದೂರಿದರು.

ಅಧಿಕ ಪ್ರಮಾಣದಲ್ಲಿರುವ ವೈದ್ಯಕೀಯ ಶುಲ್ಕವನ್ನು ಕಡಿಮೆ ಮಾಡಬೇಕು. ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಿಗೆ ಅವರು ಇ-ಮೇಲ್ ಮೂಲಕ ಮನವಿ ಸಲ್ಲಿಸಿದರು.

ಮಿಮ್ಸ್ ನ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿ ಸಂಘದ ಡಾ.ದುಶ್ಯಂತ್, ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಡಾ.ವಿಷ್ಣು, ಉಪಾಧ್ಯಕ್ಷೆ ಡಾ.ಹರ್ಷಿತಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News