ಸೀಟುಗಳ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ಖಂಡನೆ

Update: 2020-05-08 17:52 GMT

ಮಂಗಳೂರು, ಮೇ 8: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ದ.ಕ. ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಕೊರೋನ-ಲಾಕ್‌ಡೌನ್‌ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.ಈ ಸಂದರ್ಭ ಸರಕಾರ ಜನರ ಜೊತೆ ನಿಲ್ಲಬೇಕೆ ಹೊರತು ಜನರನ್ನು ಸಂಕಷ್ಟಕ್ಕೀಡು ಮಾಡಬಾರದು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೊತ್ತರ ಪದವಿ ಸೀಟುಗಳ ಶುಲ್ಕ ಹಚ್ಚಳ ಮಾಡಿ ವೈದ್ಯಕೀಯ ಶಿಕ್ಷಣದ ವ್ಯಾಪಾರೀಕರಣವನ್ನು ಸರಕಾರ ಪ್ರೊತ್ಸಾಹಿಸುತ್ತಿದೆ ಎಂದು ಎಸ್‌ಎಫ್‌ಐ ದ.ಕ. ಜಿಲ್ಲಾಧ್ಯಕ್ಷೆ ಮಾಧುರಿ ಬೊಳಾರ್ ಆರೋಪಿಸಿದ್ದಾರೆ.

ಸರಕಾರ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಳದ ಆದೇಶ ಹೊರಡಿಸಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬರುವ ವಿದ್ಯಾರ್ಥಿಗಳು ಶಿಕ್ಷಣದಿಂದ ಇನ್ನೂ ವಂಚಿತರಾಗಲಿದ್ದಾರೆ. ತಕ್ಷಣ ಸರಕಾರ ಶುಲ್ಕ ಹೆಚ್ಚಳದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News