ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಆರೋಗ್ಯವಾಗಿದ್ದೇನೆ: ಗೃಹ ಸಚಿವ ಅಮಿತ್ ಶಾ

Update: 2020-05-09 11:07 GMT

ಹೊಸದಿಲ್ಲಿ: ತನ್ನ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಗೃಹಸಚಿವ ಅಮಿತ್ ಶಾ ಅವರು ನಿರಾಕರಿಸಿದ್ದು, ತಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

“ನಾನು ಸಂಪೂರ್ಣವಾಗಿ ಆರೋಗ್ಯದಿಂದಿದ್ದೇನೆ ಮತ್ತು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹರಿಯಬಿಡುತ್ತಿದ್ದಾರೆ” ಎಂದವರು ಹೇಳಿದ್ದಾರೆ.

ದೇಶವೇ ಕೊರೋನ ವೈರಸ್ ವಿರುದ್ಧ ಹೋರಾಡುತ್ತಿರುವಾಗ ತಾನು ಈ ವದಂತಿಗಳ ಬಗ್ಗೆ ಗಮನ ಹರಿಸಿರಲಿಲ್ಲ. ತಾನು ಗೃಹ ಸಚಿವನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News