×
Ad

ಮೈಸೂರು; ಮಧ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

Update: 2020-05-09 21:48 IST

ಮೈಸೂರು, ಮೇ.9: ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಮೈಸೂರಿನಲ್ಲಿ ಮೌನ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಶನಿವಾರ ಮೌನ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಕಚೇರಿ ಮುಂದೆ ಮದ್ಯ ನಿಷೇಧಿಸುವಂತೆ ಆಗ್ರಹಿಸಿ ಫಲಕಗಳನ್ನು ಪ್ರದರ್ಶಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಗಳಾದ ಪುಷ್ಪಲತಾ ಜಗನ್ನಾಥ್, ಪುಷ್ಪಲತಾ ಚಿಕ್ಕಣ್ಣ, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಸೇರಿದಂತೆ ಇತರರು ಭಾಗಿಯಾಗಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News