ರಸ್ತೆ ಅಪಘಾತ: ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಪ್ರಾಣಾಪಾಯದಿಂದ ಪಾರು

Update: 2020-05-09 18:06 GMT

ಚಿತ್ರದುರ್ಗ, ಮೇ.9: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರ ಕಾರು ಅಪಘಾತಕ್ಕೊಳಗಾಗಿದ್ದು, ಅತೀಕ್ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶನಿವಾರ ಘಟನೆ ಸಂಭವಿಸಿದ್ದು, ಎಲ್.ಕೆ.ಅತೀಕ್ ಅವರು ಸಂಚರಿಸುತ್ತಿದ್ದ ಇನ್ನೋವಾ ಕಾರಿಗೆ ಲಾರಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಅತೀಕ್ ಅವರು ಇನ್ನೋವಾ ಕಾರಿನಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಮಾಡುತ್ತಿದ್ದ ವೇಳೆ ಚಿತ್ರದುರ್ಗದ ಮುರುಘಾ ಮಠದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಿಂದ ಅತೀಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ಎಲ್.ಕೆ.ಅತೀಕ್ ಅವರು ಪ್ರತಿಕ್ರಿಯೆ ನೀಡಿದ್ದು, ಇದೊಂದು ಗಂಭೀರ ಅಪಘಾತ. ಆದರೆ ನನಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತದ ತೀವ್ರತೆಗೆ ಎದೆ ಹಾಗೂ ಭುಜದ ಭಾಗಕ್ಕೆ ನೋವಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News