ನಾಳೆ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ವೀಡಿಯೊ ಕಾನ್ಫರೆನ್ಸ್
Update: 2020-05-10 15:07 IST
ಹೊಸದಿಲ್ಲಿ,ಮೇ 10: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಮುಖ್ಯಮಂತ್ರಿಗಳ ಜೊತೆಗೆ ಮತ್ತೊಂದು ವೀಡಿಯೊ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇ 17ರಂದು ಲಾಕ್‌ಡೌನ್ ಕೊನೆಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.
ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಕಾರ್ಯದರ್ಶಿಗಳ ಜೊತೆಗೆ ಇಂದು ವೀಡಿಯೊ ಕಾನ್ಫರೆನ್ಸ್ ನಡೆಸಿದರು.
ರೆಡ್, ಗ್ರೀನ್ ಹಾಗೂ ಆರೆಂಜ್ ವಲಯಗಳ ಕುರಿತು ಹೆಚ್ಚಿನ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ವಲಸಿಗರ ವಾಪಸಾತಿಯಿಂದ ಜಿಲ್ಲೆಗಳಲ್ಲಿ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೆಚ್ಚಿನ ಜಿಲ್ಲೆಗಳು ರೆಡ್ ವಲಯಕ್ಕೆ ಸೇರುತ್ತಿವೆ ಎಂದು ರಾಜ್ಯಗಳ ವಾದವಾಗಿದೆ