ಬಳ್ಳಾರಿಯಲ್ಲಿ 7 ಬಾಲ್ಯ ವಿವಾಹಗಳಿಗೆ ತಡೆ

Update: 2020-05-10 11:48 GMT

ಬಳ್ಳಾರಿ, ಮೇ 10: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ಜಿಲ್ಲೆಯಲ್ಲಿ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನ ಪತ್ತೆ ಹಚ್ಚಿ, ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿ ತಾಲೂಕಿನ ಕುಂಟನಾಳು ಗ್ರಾಮದಲ್ಲಿ ಮೇ 10 ಮತ್ತು 13ರಂದು ಪ್ರತ್ಯೇಕವಾಗಿ 7 ಬಾಲ್ಯ ವಿವಾಹಗಳನ್ನ ಮಾಡಲು ಪೋಷಕರು ನಿಶ್ಚಯಿಸಿದ್ದರು. ಈ ಕುರಿತು ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ಕೂಡಲೇ ಗ್ರಾಮಕ್ಕೆ ತೆರಳಿ, ಬಾಲ್ಯ ವಿವಾಹಗಳನ್ನ ತಡೆದಿದ್ದಾರೆ.

ಬಳ್ಳಾರಿ ಜಿಲ್ಲೆಯ ವಿವಿಧೆಡೆ 7 ಬಾಲ್ಯ ವಿವಾಹಗಳನ್ನು ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು. 17 ವರ್ಷದ ಇಬ್ಬರು, 16 ವರ್ಷದ ನಾಲ್ವರು ಹಾಗೂ 14 ವರ್ಷದ ಓರ್ವ ಬಾಲಕಿಯನ್ನು ಅಧಿಕಾರಿಗಳ ತಂಡ ರಕ್ಷಣೆ ಮಾಡಿ ಶಾಂತಿ ಧಾಮದಲ್ಲಿ ಇರಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಲಕ್ಷ್ಮೀಪುರದಲ್ಲಿ ಮೇ 11ರಂದು ನಡೆಯಬೇಕಿದ್ದ ಈ ಬಾಲ್ಯ ವಿವಾಹಗಳನ್ನ ತಡೆಯಲಾಗಿದೆ. ವಧು-ವರರ ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಂಡು ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News