ಕಲಬುರಗಿ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಸಹೋದರರಿಬ್ಬರ ಹತ್ಯೆ
Update: 2020-05-10 18:12 IST
ಕಲಬುರ್ಗಿ, ಮೇ 10: ಸಹೋದರರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯಲ್ಲಾಲಿಂಗ ಮತ್ತು ಆತನ ಸಹೋದರ ಗಂಗಣ್ಣ ಕೊಲೆಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.
ಹಳೇ ದ್ವೇಷವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.