ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2020-05-10 16:31 GMT

ಮಣಿಪಾಲ, ಮೇ 10: ಮಣಿಪಾಲದ ಮಾಧವನಗರ ಬಳಿ ಮೇ 7ರಂದು ರಾತ್ರಿ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಓರ್ವನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲ ಈಶ್ವರನಗರದ ನಿವಾಸಿ ಉಜ್ವಲ್ ದುಗ್ಗಲ್(23) ಎಂಬಾತನನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ಆತ ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News