×
Ad

ರಾಜ್ಯದಲ್ಲಿ ಇಂದು 10 ಮಂದಿಗೆ ಕೊರೋನ ಸೋಂಕು ದೃಢ

Update: 2020-05-11 12:27 IST

ಬೆಂಗಳೂರು : ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ರವಿವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆ ವರೆಗಿನ ಅವಧಿಯಲ್ಲಿ ಒಟ್ಟು 10 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ.

ಈ ಪೈಕಿ ದಾವಣಗೆರೆಯಲ್ಲಿ 3 ಮಂದಿ, ಬಾಗಲಕೋಟೆ, ಬೀದರ್ ನ ತಲಾ ಇಬ್ಬರು,  ಕಲಬುರಗಿ, ಹಾವೇರಿ, ವಿಜಯಪುರದ ಓರ್ವರಂತೆ ಒಟ್ಟು 10 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News