ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ

Update: 2020-05-11 12:56 GMT

ಬೆಂಗಳೂರು, ಮೇ 11: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಅಂತರಾಷ್ಟ್ರೀಯ ಗರಿ ಮೂಡಿದೆ. 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿಗಳಲ್ಲಿ ಭಾರತ ಮತ್ತು ಕೇಂದ್ರ ಏಷ್ಯಾದಲ್ಲಿ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಮನ್ನಣೆಗೆ ಭಾಜನವಾಗಿದೆ.  

ಪ್ರಶಸ್ತಿ ಆಯ್ಕೆಗೆ ನಡೆದ ಮತದಲ್ಲಿ ಗ್ರಾಹಕರು ನಾಲ್ಕು ವರ್ಷಗಳಲ್ಲಿ ಮೂರನೇ ಬಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ ನೀಡಿದ್ದಾರೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ. ಮಾರರ್, 11 ವರ್ಷದ ಕೆಂಪೇಗೌಡ ವಿಮಾನ ನಿಲ್ದಾಣವು ಭಾರತ ಮತ್ತು ಕೇಂದ್ರ ಏಷ್ಯಾದಲ್ಲಿ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂದು 3ನೇ ಬಾರಿಗೆ ಹೆಸರು ಗಳಿಸಿರುವುದು ಗಮನಾರ್ಹ ಸಾಧನೆಯಾಗಿದೆ.  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮ್ಮ ಪ್ರವಾಸಿಗರಿಗೆ ವಿಶ್ವಮಟ್ಟದ ಅನುಭವವನ್ನು ಪೂರೈಸಲು ನಮ್ಮ ಬದ್ಧತೆಯನ್ನು ಈ ಪ್ರಶಸ್ತಿ ಮತ್ತಷ್ಟು ಹೆಚ್ಚಿಸಿದೆ ಎಂದು ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News