ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್: ಅರ್ಜಿಗಳ ಪರಿಶೀಲನೆಗೆ ಸಮಿತಿ ನೇಮಿಸಿದ ಸುಪ್ರೀಂ

Update: 2020-05-11 15:26 GMT

ಹೊಸದಿಲ್ಲಿ, ಮೇ 11: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆಗಳ ಮರುಸ್ಥಾಪನೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲನೆಗಾಗಿ ಗೃಹ ಸಚಿವಾಲಯದ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯ ರಚನೆಗೆ ಸರ್ವೋಚ್ಚ ನ್ಯಾಯಾಲಯವು ಸೋಮವಾರ ಆದೇಶಿಸಿದೆ.

 ಜಮ್ಮು-ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಸಂಪರ್ಕ ಸಚಿವಾಲಯದ ಕಾರ್ಯದರ್ಶಿಗಳೂ ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ,ಆರ್.ಸುಭಾಷ ರೆಡ್ಡಿ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

ಫೌಂಡೇಷನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್,ಸೋಯಿಬ್ ಕುರೇಷಿ ಮತ್ತು ಜಮ್ಮು-ಕಾಶ್ಮೀರ ಖಾಸಗಿ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಹೊರಡಿಸಿದ ಸರ್ವೋಚ್ಚ ನ್ಯಾಯಾಲಯವು, ರಾಷ್ಟ್ರೀಯ ಭದ್ರತೆ ಮತ್ತು ಮಾನವ ಹಕ್ಕುಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಹೇಳಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News