×
Ad

ಅಕ್ರಮ ದಾಸ್ತಾನು: ಕಲಬುರಗಿಯಲ್ಲಿ 1,200 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ ಅಧಿಕಾರಿಗಳು

Update: 2020-05-11 22:08 IST
ಸಾಂದರ್ಭಿಕ ಚಿತ್ರ

ಕಲಬುರ್ಗಿ, ಮೇ 11: ಪಡಿತರ ಧಾನ್ಯ ಕಾಳಸಂತೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಆರೋಪ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 1,200 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಬಡ ಕುಟುಂಬಗಳಿಗೆ ನೀಡಬೇಕಾಗಿದ್ದ ಅಕ್ಕಿಯನ್ನು ನೆರೆರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಪಿಎಂಸಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, 1,200 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News