×
Ad

ಅನುದಾನರಹಿತ ಶಾಲಾ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಲು ಸಿಎಂಗೆ ದೇವೇಗೌಡ ಪತ್ರ

Update: 2020-05-11 23:10 IST

ಬೆಂಗಳೂರು, ಮೇ 11: ಕೊರೋನ ಸೋಂಕು ತಡೆಗೆ ಹೇರಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೂ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಶಿಕ್ಷಕರ ಆರ್ಥಿಕ ತೊಂದರೆ ನೀಗಿಸಲು ಸರಕಾರ ಕೂಡಲೇ 1,300 ಕೋಟಿ ರೂ. ಆರ್‍ಟಿಇ ಬಾಕಿಯನ್ನು ಬಿಡುಗಡೆ ಮಾಡಬೇಕು. ಆರ್ಥಿಕ ನೆರವು ಘೋಷಣೆ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಶಿಕ್ಷಕರ ಸೇವೆಗೆ ಉತ್ತೇಜನ ನೀಡಬೇಕು. ಈ ಬಗ್ಗೆ ತಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಿ ಶಿಕ್ಷಕರ ಹಿತರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಮಾಡಿರುವಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಲಾಕ್‍ಡೌನ್ ಪರಿಣಾಮ ಖಾಸಗಿ ವಲಯದ ಶಿಕ್ಷಕರು ಆರ್ಥಿಕ ತೊಂದರೆಗೆ ಸಿಲುಕಿದ್ದಾರೆ. ಶಿಕ್ಷಣ ಸಂಸ್ಥೆಗಳು ಎರಡು ತಿಂಗಳಿನಿಂದ ವೇತನ ನೀಡಲು ಸಮಸ್ಯೆಯಾಗಿದೆ. ಹೀಗಾಗಿ ಅನುದಾನರಹಿತ ಖಾಸಗಿ ಶಾಲಾ ಶಿಕ್ಷಕರಿಗೆ ಸರಕಾರ ನೆರವು ಘೋಷಿಸಬೇಕು ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News