ಗಡಿ ಭಾಗದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗೆ ಕಾಂಗ್ರೆಸ್ ನಿಂದ ತಂಡ ರಚನೆ
ಬೆಂಗಳೂರು, ಮೇ 12: ರಾಜ್ಯದ ಗಡಿ ಭಾಗಗಳಲ್ಲಿ ಹೊರ ರಾಜ್ಯಗಳಿಗೆ ಹೋಗುತ್ತಿರುವ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವ ಸಂಕಷ್ಟಕ್ಕೆ ಒಳಗಾಗಿರುವ ಜನತೆಗೆ ಸಹಾಯ ಮಾಡಲು ಕಾಂಗ್ರೆಸ್ ನಾಯಕರ ತಂಡವನ್ನು ರಚನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲೆಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯನ್ನು ಉಸ್ತುವಾರಿ ಮಾಡಲಾಗಿದ್ದು, ಮಾಜಿ ಸಚಿವ ವೀರಕುಮಾರ್ ಪಾಟೀಲ್(ಮೊಬೈಲ್ ಸಂಖ್ಯೆ-9448396200), ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಣ ರಾವ್ ಚಿಂಗ್ಲೆ(9448128409), ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಂಕಜ್ ವಿ.ಪಾಟೀಲ್(9901545222) ಹಾಗೂ ಪಿಕೆಪಿಎಸ್ ಅಧ್ಯಕ್ಷ ಅನೀಲ್ ಚೌಗಲೆ(9481746777)ಯನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಬೀದರ್ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಸ್ತುವಾರಿಯಾಗಿದ್ದು, ವೆಂಕಟ್ ಶಿಂಧೆ(9686225100) ಸಂಚಾಲಕ, ಬಿಜಾಪುರ ಜಿಲ್ಲೆಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಉಸ್ತುವಾರಿಯಾಗಿದ್ದು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅರ್ಜುನ್ ರಾಥೋಡ್(8618120792) ಸಂಚಾಲಕರಾಗಿದ್ದಾರೆ.
ಗುಲ್ಬರ್ಗ ಜಿಲ್ಲೆಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಡಾ.ಅಜಯ್ ಸಿಂಗ್‍ರನ್ನು ಉಸ್ತುವಾರಿ ಮಾಡಲಾಗಿದ್ದು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈರಣ್ಣ ಜಲ್ಕಿ(8310557177) ಸಂಚಾಲಕ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಉಸ್ತುವಾರಿಯಾಗಿದ್ದು, ಪ್ರಶಾಂತ್(9449120255)ರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.